ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶಾಲಾ ವಿದ್ಯಾರ್ಥಿಗಳು ಅಪಾಯಕಾರಿ ಸಂಚಾರ ನಡೆಸಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಟಾಟಾ ಏಸ್ ವಾಹನದಲ್ಲಿ ಜೋತು ಬಿದ್ದು ಪ್ರಯಾಣಿಸುತ್ತಿದ್ದು, ಈ ವೇಳೆ ಬಸ್ ಇಲ್ವಾ ಎಂದು ಪ್ರಶ್ನಿಸಿದಾಗ ವಿದ್ಯಾರ್ಥಿಗಳು ಇಲ್ಲ ಸರ್ ಎಂದು ಉತ್ತರಿಸಿದ್ದಾರೆ. ಸಾರಿಗೆ ಸಮಸ್ಯೆಯಿಂದಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಇಂತಹ ಸಂಕಷ್ಟ ಎದುರಾಗಿದೆ.


















