ಧಾರವಾಡ : ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಕಾರಣಕ್ಕೆ ಧಾರವಾಡ್ ಬಂದ್ ಗೆ ಕರೆ ನೀಡಲಾಗಿದೆ.
ಈ ವೇಳೆ ಪ್ರತಿಭಟನಾಕಾರರು ದರ್ಪ ಮೆರೆದಿರುವ ಘಟನೆ ನಡೆದಿದೆ. ಪ್ರತಿಭಟನೆ ಸಂದರ್ಭದಲ್ಲಿ ಹಲವೆಡೆ ಬಲವಂತದಿಂದ ಅಂಗಡಿ-ಮುಂಗಟ್ಟು ಮುಚ್ಚಿಸಲಾಗುತ್ತಿದೆ. ಈ ವೇಳೆ ಪ್ರತಿಭಟನಾಕಾರರು ಬೀದಿ ಬದಿ ವ್ಯಾಪಾರಸ್ಥರ ಮೇಲೆ ದರ್ಪ ಮೆರೆದಿರುವ ಘಟನೆ ನಡೆದಿದೆ.
ಬೀದಿ ಬದಿ ವ್ಯಾಪಾರಿ ಮೇಲೆ ದರ್ಪ:
ಅಮಿತ್ ಶಾ ಹೇಳಿಕೆ ಖಂಡಿಸಿ ಬಂದ್ ನಡೆದಿದ್ದ ಸಂದರ್ಭದಲ್ಲಿ ದಲಿತ ಮುಖಂಡ ಎಂ.ಅರವಿಂದ್ ಎಂಬುವವರು ಬೀದಿ ಬದಿಯ ವ್ಯಾಪಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಧಾರವಾಡ ಶ್ರೀನಗರ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಬೀದಿ ಬದಿಯಲ್ಲಿ ಇಡ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇಡ್ಲಿ ಮಾರುತ್ತಿದ್ದ ವ್ಯಕ್ತಿ ಕೈ ಮುಗಿದು ಬೇಡಿಕೊಂಡರೂ ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಲು ಯತ್ನಿಸಿದ್ದಾರೆ. ಈ ವೇಳೆ ವ್ಯಾಪಾರಿಯ ಕಪಾಳಮೋಕ್ಷ ಮಾಡಿದ್ದಾರೆ. ಆನಂತರವೂ ಒತ್ತಾಯಪೂರ್ವಕವಾಗಿ ಹಲೆವೆಡೆ ಬಂದ್ ಮಾಡಲಾಗಿದೆ.