ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಮಧ್ಯಂತರ ಜಾಮೀನ ಪಡೆದಿದ್ದಾರೆ. ಇದಕ್ಕೆ ತಡೆ ಕೋರಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ಮನವಿ ಯಾವ ವೇಳೆ ಸಲ್ಲಿಸಬೇಕು ಎಂಬುವುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಮೇಲ್ಮನವಿ ಸಲ್ಲಿಸಬೇಕಾದರೆ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ಆನಂತರವೇ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್, ಬೆನ್ನು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿತ್ತು. ಈಗ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.