ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಅಲ್ಲದೇ, ಎ1 ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಿಕೆಯಾಗಿದೆ. ತನಿಖಾಧಿಕಾರಿಗಳ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದಿಸಿದರು. ನ್ಯಾಯಾಲಯದ ಹಾದಿ ತಪ್ಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ವಾದಿಸಿದರು.
ದರ್ಶನ್ ಅನಾರೋಗ್ಯದ ವಿಷಯದಲ್ಲಿ ಅವರ ಪರ ವಕೀಲರನ್ನು ಪ್ರಸನ್ನ ಕುಮಾರ್ ತರಾಟೆಗೆ ತೆಗೆದುಕೊಂಡರು. ದರ್ಶನ್ ಪರ ವಕೀಲರು, ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದಾರೆ. ಸಿನಿಮಾದ ರೀತಿಯಲ್ಲಿ ಇಲ್ಲಿ ಸುಳ್ಳು ಕತೆ ಕಟ್ಟಲಾಗುತ್ತಿದೆ ಎಂದು ಆರೋಪಿಸಿದರು. ವಾದ-ವಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಡಿ. 9ಕ್ಕೆ ಮುಂದೂಡಿತು.