ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಬೇಲ್ ಪಡೆದಿದ್ದಾರೆ. ಆದರೆ, ರೆಗ್ಯುಲರ್ ಬೇಲ್ ಗಾಗಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ.
ಪ್ರತ್ಯಕ್ಷ ಸಾಕ್ಷಿಯ ಹೇಳಿಕೆಗಳಲ್ಲಿ ವೈರುಧ್ಯಗಳಿವೆ. ಮರ್ಮಾಂಗಕ್ಕೆ ಹೊಡೆದ ಬಗ್ಗೆ ಮತ್ತೊಂದು ಹೇಳಿಕೆಯಲ್ಲಿ ಉಲ್ಲೇಖವಿಲ್ಲ. 161 ಹೇಳಿಕೆಗೂ, 164 ಹೇಳಿಕೆಗೂ ವ್ಯತ್ಯಾಸಗಳಿವೆ. 161 ಹೇಳಿಕೆ ಪಡೆದಾಗ ಕೇಸ್ ಡೈರಿಯಲ್ಲಿ ಎಂಟ್ರಿ ಮಾಡಬೇಕು. ಪ್ರತಿಯನ್ನು ಮ್ಯಾಜಿಸ್ಟ್ರೇಟ್ಗೆ ನೀಡಬೇಕು. ಈ ಪ್ರಕ್ರಿಯೆಗಳನ್ನು ತನಿಖಾಧಿಕಾರಿ ಪಾಲಿಸಿಲ್ಲ. ಮೊದಲ ರಿಮಾಂಡ್ ಅರ್ಜಿಗಳಲ್ಲಿ ಸಾಕ್ಷಿಗಳ ಹೇಳಿಕೆ ಉಲ್ಲೇಖವಿಲ್ಲ. ಪ್ರತ್ಯಕ್ಷ, ಪರೋಕ್ಷ ಸಾಕ್ಷಿದಾರರ ಹೆಸರುಗಳನ್ನು ನಮೂದಿಸಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದ್ದಾರೆ.
ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ತುರ್ತಾಗಿ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಹೇಳಲಾಗಿತ್ತು. ಆ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಮಧ್ಯಂತ ಜಾಮೀನು ನೀಡಲಾಗಿತ್ತು. ಆದರೆ, ಇದುವರೆಗೂ ಶಸ್ತ್ರ ಚಿಕಿತ್ಸೆ ಮಾಡಿಲ್ಲ. ಆರೋಗ್ಯದ ಕುರಿತು ಕೂಡ ಹೈಕೋರ್ಟ್ ಗೆ ಸಿ.ವಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಆದರೆ, ಕೋರಟ್ ದರ್ಶನ್ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.