ನಟ ದರ್ಶನ್ (Darshan) ಈಗಾಗಲೇ ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ.
ಅಭಿಮಾನಿ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದಕ್ಕೆ ಆತನ ಮೇಲೆ ಹಲ್ಲೆಯಾಗಿತ್ತು. ಆದರೆ, ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇದೆ ಎಂದು ಪೊಲೀಸರು ಬಂಧಿಸಿದ್ದಾರೆ.
ಇದರ ನಡುವೆಯೇ ಮತ್ತೊಂದು ಶಾಕಿಂಗ್ ವಿಚಾರ ಹೊರ ಬಿದ್ದಿದ್ದು, ಘಟನೆ ನಡೆದ ನಂತರ ನಟ ದರ್ಶನ್, ಪವಿತ್ರಾ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಎಲ್ಲ ನಿನ್ನಿಂದಲೇ ಆಯಿತು ಎಂದು ಹಲ್ಲೆ ನಡೆಸಿದ್ದರು ಎಂಬ ವರದಿಯೊಂದು ಆಗಿದೆ. ಪವಿತ್ರಾ ಹಲ್ಲೆಗೊಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬ ವಿಚಾರ ಹೊರ ಬಿದ್ದಿದೆ. ಸದ್ಯ ಈ ಕುರಿತು ತನಿಖೆ ನಡೆಯುತ್ತಿದ್ದು, ಸತ್ಯ ಇನ್ನಷ್ಟೇ ಹೊರ ಬರಬೇಕಿದೆ.
