ನಟ ದರ್ಶನ್ ಅಭಿಮಾನಿಗಳು (Darshan Fans) ಅತಿರೇಕದ ವರ್ತನೆ ತೋರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಪ್ರಸನ್ನ (Prasanna Theatre) ಚಿತ್ರಮಂದಿರದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ದರ್ಶನ್ ಅವರ ಆಪ್ತ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಟ್ರೇಲರ್ (Vaamana Trailer) ಬಿಡುಗಡೆ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ತೆರಳಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಅಭಿಮಾನಿಗಳು ಚಿತ್ರ ಮಂದಿರದ ಕುರ್ಚಿ, ಕಿಟಕಿ, ಬಾಗಿಲು ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರಮಂದಿರದ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧನ್ವೀರ್ ನಟನೆಯ ‘ವಾಮನ’ ಸಿನಿಮಾಗೆ ದರ್ಶನ್ ಬೆಂಬಲ ನೀಡಿದ್ದಾರೆ. ಆನ್ ಲೈನ್ ಮೂಲಕ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಆ ವಿಡಿಯೋವನ್ನು ‘ಪ್ರಸನ್ನ’ ಚಿತ್ರಮಂದಿರದಲ್ಲಿ ಪ್ರದರ್ಶಿಸಲಾಗಿತ್ತು. ಹೀಗಾಗಿ ಹೆಚ್ಚಿನ ಅಭಿಮಾನಿಗಳು ಭಾಗವಹಿಸಿದ್ದರು. ಈ ವೇಳೆ ಸೆಕೆಂಡ್ ಕ್ಲಾಸ್ ನಲ್ಲಿರುವ 80 ಸೀಟ್ ಹಾಗೂ ಬಾಲ್ಕನಿಯಲ್ಲಿನ 10 ಸೀಟ್ ಗಳನ್ನು ಮುರಿದು ಹಾಕಿದ್ದಾರೆ ಎನ್ನಲಾಗಿದೆ. ಅಭಿಮಾನಿಗಳ ಅತಿರೇಕಕ್ಕೆ ಈಗ ಆಕ್ರೋಶ ವ್ಯಕ್ತವಾಗುತ್ತಿದೆ.