ರೇಣುಕಾಸ್ವಾಮಿ (Renukaswamy) ಕೊಲೆಗೆ (Murder) ಸಂಬಂಧಿಸಿದಂತೆ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್ (Darshan) ಕೊನೆಗೂ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ನಟ ದರ್ಶನ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ 102 ದಿನಗಳೇ ಕಳೆದಿವೆ. ಇಲ್ಲಿಯವರೆಗೂ ಮೊದಲ ಆರೋಪಿ ಪವಿತ್ರಾಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿ ತಿರಸ್ಕೃವಾಗಿತ್ತು. ಈಗ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ದರ್ಶನ್ ಸೇರಿದಂತೆ ಇನ್ನಿತರ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಚಾರ್ಜ್ ಶೀಟ್ ಸಲ್ಲಿಕೆಯಾಗಿ ಎರಡು ವಾರಗಳು ಆಗಿದ್ದರೂ, ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇಂದು ಅರ್ಜಿ ಸಲ್ಲಿಕೆಯಾಗಿದೆ. ಸೆಷನ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆಗಾಗಿ ಇಂದೇ ಮನವಿ ಮಾಡಿಕೊಳ್ಳಲಾಗಿತ್ತು. ದರ್ಶನ್ ಪರ ಸುನಿಲ್ ಕೋರ್ಟಿಗೆ ಹಾಜರಾಗಿದ್ದರು. ಎಸ್.ಪಿಪಿಗೆ ನೋಟಿಸ್ ಜಾರಿ ಮಾಡಿ ಇದೇ ಸೋಮವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಪವಿತ್ರಾ ಗೌಡ ಜಾಮೀನು ಅರ್ಜಿಯ ವಿಚಾರಣೆ ಕೂಡ ಬಾಕಿ ಇದೆ. ಈ ಬೆನ್ನಲ್ಲೇ ದರ್ಶನ್ ಕೂಡ ಅರ್ಜಿ ಸಲ್ಲಿಸಿದ್ದಾರೆ. ಈ ಮಧ್ಯೆ ದರ್ಶನ್ ಅಭಿಮಾನಿಗಳು ಜಾಮೀನು ಸಿಗಲೆಂದು ದೇವರಲ್ಲಿ ಹರಕೆ ಹೊರುತ್ತಿದ್ದಾರೆ.