ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸುವ (Bengaluru Central Jail) ನಟ ದರ್ಶನ್ಅಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎನ್ನಲಾಗುತ್ತಿರುವ ಫೋಟೋ ವೈರಲ್ ಆಗಿದ್ದು, ಈ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದೆ.
ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಎರಡರದಲ್ಲಿ ಎ1 ದರ್ಶನ್ ಆಗಿದ್ದಾರೆ. ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚಿಸಿದ್ದಾರೆ.
ಬೇಗೂರು ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯುತ್ತಿದೆ. ಜೈಲಿನ ಲಾನ್ ನಲ್ಲಿ ಕುಳಿತು ಕಾಫಿ ಸಿಗರೇಟ್ ಸೇದುತ್ತ, ರೌಡಿಶೀಟರ್ಗಳ ಜೊತೆ ದರ್ಶನ್ ಬೇರೆತಿದ್ದು ಹೇಗೆ? ಲಾನ್ ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದ್ದು ಯಾರು? ಕಾಫಿ ಮಗ್ ಹೇಗೆ ಬಂತು? ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧವಿದ್ದರೂ ಬಳಕೆಗೆ ಸಿಕ್ಕಿದ್ದು ಹೇಗೆ? ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ.
ಎರಡನೇ ಪ್ರಕರಣದಲ್ಲಿ ಮೊಬೈಲ್ ಫೋನ್ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಕುರಿತು ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಿದ್ದಾರೆ. ಫೋಟೋ ತೆಗೆದಿದ್ದು ಹಾಗೂ ವಿಡಿಯೋ ಕರೆ ಮಾಡಿದ್ದು ಯಾರು? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ, ಆರೋಪಿಗಳ ಕೈಗೆ ಮೊಬೈಲ್ ಸಿಕ್ಕಿದ್ದು ಹೇಗೆ.? ಅದನ್ನು ಒದಗಿಸಿದ್ದವರು ಯಾರು? ಎಂಬೆಲ್ಲ ತನಿಖೆ ನಡೆಸುತ್ತಿದ್ದಾರೆ.
ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಮೂರನೇ ಪ್ರಕರಣ ದಾಖಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ತನಿಖೆ ನಡೆಸುತ್ತದೆ. ಹೀಗಾಗಿ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಶುರುವಾದಂತಾಗಿದೆ.