ಬೆಂಗಳೂರು: ಇಂದು ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 24 ರಂದು ವಾದ- ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿತ್ತು.
ದರ್ಶನ್ ಸೇರಿದಂತೆ 7 ಜನ ಆರೋಪಿಗಳ ಜಾಮೀನು ರದ್ದು ಪಡಿಸುವಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಪರವಾಗಿ ಸಿದ್ದಾರ್ಥ ಲೂತ್ರಾ ವಾದ ಮಂಡಿಸಿದ್ದರು.
ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲ್, ನ್ಯಾಯಮೂರ್ತಿ ಮಹದೇವನ್ ಪೀಠದಿಂದ ಆದೇಶ ಪ್ರಕಟವಾಗಲಿದೆ. ಹೀಗಾಗಿ ದರ್ಶನ್ ಆಂಡ್ ಗ್ಯಾಂಗ್ ಗೆ ಢವಢವ ಶುರುವಾಗಿದೆ.



















