ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಟ ದರ್ಶನ್ ಚಾಮುಂಡೇಶ್ವರಿ ದರ್ಶನ ಮಾಡಿದ್ದಾರೆ. ಈ ವೇಳೆ ಅಭಿಮಾನಿಗಳು ದರ್ಶನ್ ರನ್ನು ಕಂಡು ಮುಗಿ ಬಿದ್ದಿದ್ದಾರೆ.
ಆಷಾಢ ಮಾಸದಲ್ಲಿ ಶಕ್ತಿದೇವತೆ ಆರಾಧನೆ, ಶ್ರಾವಣ ಮಾಸದಲ್ಲಿ ವಿಷ್ಣು ದೇವರ ಆರಾಧನೆ, ಹಾಗೂ ಕಾರ್ತಿಕ ಮಾಸದಲ್ಲಿ ಶಿವನ ಅರಾಧನೆ ಮಾಡುವುದು ವಿಶೇಷ. ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾದ ಕಾರಣ ಶಕ್ತಿದೇವಿಗೆ ವಿಜಯಲಕ್ಷ್ಮಿ ಅಲಂಕಾರ ಮಾಡಲಾಗಿದೆ. ಬೆಳಗ್ಗಿನ ಜಾವ 3 ಗಂಟೆಯಿಂದಲೇ ಚಾಮುಂಡೇಶ್ವರಿ ತಾಯಿಯ ಮೂಲ ವಿಗ್ರಹಕ್ಕೆ ಅಭಿಷೇಕ, ಅರ್ಚನೆ, ಅಲಂಕಾರ ಮಾಡಿ, ಮಂಗಳಾರತಿ ಮಾಡಿ, ನಂತರ 5.30 ರಿಂದ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.
ನಟ ದರ್ಶನ್ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಅಭಿಮಾನಿಗಳು ದರ್ಶನ್ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದರು.