ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಕೈ ನಡುಗುತ್ತಿವೆ. ಒಂದೇ ಒಂದು ಸಿಗರೇಟ್ ಕೊಡಿಸಿ ಎಂದು ಪೊಲೀಸರನ್ನು ಕೇಳಿದ್ದಾರೆ ಎನ್ನಲಾಗಿದೆ.
6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ದರ್ಶನ್ (Actor Darshan), ವಿಚಾರಣೆಯಲ್ಲಿ ನಾನು ಏನು ತಪ್ಪು ಮಾಡಿಲ್ಲ, ನನಗೆ ಗೊತ್ತಿಲ್ಲ. ನಾನು ಕೊಲೆ ಮಾಡಲು ಹೇಳಿಲ್ಲ, ಮಾಡಿಸಿಯೂ ಇಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಒಂದು ಸಿಗರೇಟ್ (Cigarette) ಕೊಡಿಸಿ, ಕೈಗಳು ನಡುಗುತ್ತಿವೆ ಅಂತ ಪೊಲೀಸರಿಗೆ ಬೇಡಿಕೊಂಡಿದ್ದಾರೆ. ಇದಕ್ಕೆ ಗರಂ ಆಗಿರುವ ಪೊಲೀಸರು ಕೊಡಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪದಿಂದ ಪಾರಾಗಲು ದರ್ಶನ್ ಭಾರೀ ಪ್ಲ್ಯಾನ್ ಮಾಡಿದ ವಿಚಾರ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ನಂತರ ಮೂವರಿಗೆ ಶರಣಾಗುವಂತೆ ದರ್ಶನ್ ಸೂಚನೆ ನೀಡಿದ್ದರು. ಜೂನ್ 10 ರಂದು ಮೂವರು ಕಾಮಾಕ್ಷಿಪಾಳ್ಯ ಠಾಣೆಗೆ ಬಂದು ಶರಣಾಗಿದ್ದರು. ಹಣಕಾಸು ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು (Police) ಮೂವರನ್ನು ಪ್ರತ್ಯೇಕವಾಗಿ ಕರೆದು ಪೊಲೀಸ್ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ.