ಮಾಜಿ ಸಂಸದೆ ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ ಸಮಾರಂಭಕ್ಕೆ ಮನೆಯ ಮಗ ದರ್ಶನ್ ಗೈರಾಗಿದ್ದಾರೆ.
ಈ ಕಾರ್ಯಕ್ರಮ ಸಿಲಿಕಾನ್ ಸಿಟಿಯ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ದರ್ಶನ್ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ದರ್ಶನ್ ಗೈರಾಗಿದ್ದು, ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಈ ವೇಳೆ ಮಗುವಿಗೆ ‘ರಾಣಾ ಅಮರ್ ಅಂಬರೀಶ್’ ಎಂದು ಹೆಸರಿಡಲಾಗಿದೆ.
ಈ ಕಾರ್ಯಕ್ರಮಕ್ಕೆ ದರ್ಶನ್ ಬರಬಹುದು ಎಂಬ ನಿರೀಕ್ಷೆ ಇತ್ತು. ಸುಮಲತಾ ಮನೆಯಲ್ಲಿ ಏನೇ ಕಾರ್ಯಕ್ರಮ ನಡೆದರೂ ಅಲ್ಲಿ ಹಾಜರಿರುತ್ತಿದ್ದ ದರ್ಶನ್, ಈಗ ಗೈರಾಗಿರುವುದು ಚರ್ಚೆಗೆ ಕಾರಣವಾಗಿದೆ.
ಆದರೆ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಆಗಮಿಸಿ, ಶುಭ ಹಾರೈಸಿದ್ದಾರೆ. ಆದರೆ, ಮದರ್ ಇಂಡಿಯಾ ಮನೆಯ ಕಾರ್ಯಕ್ರಮದ ಆಮಂತ್ರಣವನ್ನು ಸ್ವೀಕರಿಸದ ದರ್ಶನ್ ನಡೆ ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಮೊನ್ನೆಯಷ್ಟೇ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅಭಿಷೇಕ್ ರನ್ನು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಅನ್‌ಫಾಲೋ ಮಾಡಿದ್ದರು. ಇದಕ್ಕೆ ಅಂಬರೀಶ್ ಕುಟುಂಬದ ಮೇಲಿನ ಮುನಿಸು ಕಾರಣ ಎಂದು ಭಾವಿಸಲಾಗಿತ್ತು. ಆದರೆ, ಈ ಆರೋಪವನ್ನು ಸುಮಲತಾ ಅಲ್ಲಗಳೆದಿದ್ದರು. ಆದರೆ, ಈಗ ದರ್ಶನ್ ಗೈರಾಗಿರುವುದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.