ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆ. 30ಕ್ಕೆ ಮುಂದೂಡಿದೆ.
ಶುಕ್ರವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸೆ. 30ಕ್ಕೆ ವಿಚಾರಣೆ ಮುಂದೂಡಿತು. ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಕೋರ್ಟ್ ಮುಂದೂಡಿತು.
ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್ ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ವಾದಿಸಲು ಹಿರಿಯ ವಕೀಲರು ಸಿವಿ ನಾಗೇಶ್ ಬರಬೇಕಾಗಿದ್ದು, ಅವರು ಬಾರದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಇನ್ನಷ್ಟು ದಿನದ ಕಾಲಾವಕಾಶ ಕೇಳಲಾಗಿದೆ. ವಾದ ಮಂಡನೆಗೆ ದರ್ಶನ್ ಪರ ವಕೀಲರು ಕಾಲಾವಕಾಶ ಕೇಳಿದ ಬೆನ್ನಲ್ಲೆ, ಎಸ್ ಪಿಪಿ ಪ್ರಸನ್ನ ಅವರು ಮಾತನಾಡಿ, ‘ಆಕ್ಷೇಪಣೆ ಸಲ್ಲಿಸಿಲ್ಲವೆಂದು ದರ್ಶನ್ ವಕೀಲರು ತಕರಾರು ತೆಗೆಯುತ್ತಿದ್ದರು. ಈಗ ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ.
ವಾದಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಆದರೆ, ವಾದಿಸಲು ದರ್ಶನ್ ಪರ ವಕೀಲರು ಸಮಯ ಕೇಳಿದ್ದರಿಂದಾಗಿ ಸೆ. 30ಕ್ಕೆ ವಿಚಾರಣೆ ಮುಂದೂಡಲಾಯಿತು.