ದರ್ಶನ್‌ಗೆ (Darshan) ಇಂದು (ಅ.30) 6 ವಾರಗಳ ಕಾಲ ಜಾಮೀನು (Bail) ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಅಭಿಮಾನಿಗಳು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ದರ್ಶನ್ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳ ಖುಷಿ ಮುಗಿಲು ಮುಟ್ಟಿದೆ. ಹಾಗಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಟನ 20 ಅಡಿ ಮತ್ತು 10 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದಾರೆ. ಜೊತೆಗೆ ಪಟಾಸಿ ಸಿಡಿಸಿ ಅನ್ನದಾನ ಮತ್ತು ಸಿಹಿ ತಿನಿಸುಗಳನ್ನು ಹಂಚಿ ಸಂಭ್ರಮಿಸಿದ್ದಾರೆ.
ದರ್ಶನ್ ಕುಟುಂಬದಲ್ಲೂ ಸಂಭ್ರಮ ಮನೆ ಮಾಡಿದೆ. ಆರ್‌ಆರ್ ನಗರ ನಟನ ನಿವಾಸದ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ದೀಪಾವಳಿ ಸಂದರ್ಭದಲ್ಲಿ ದರ್ಶನ್ ಪುತ್ರನಿಗೂ ಸಿಹಿ ಸುದ್ದಿ ಸಿಕ್ಕಿದೆ. ಮಗ ವಿನೇಶ್ ತಂದೆಯ ಜೊತೆ ಅ.31ರಂದು ಹುಟ್ಟುಹಬ್ಬ ಮತ್ತು ದೀಪಾವಳಿ ಆಚರಿಸಲಿದ್ದಾನೆ.