ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ (Darshan And Gang) ನ ನ್ಯಾಯಾಂಗ ಬಂಧನದ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದೆ.
ಗುರುವಾರ (ಆ.1) ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿದ್ದು SIT ಪೊಲೀಸರು (Kamakshipalya Police), ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ಗೆ (Karnataka Highcourt) ಮನವಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಿಂದ 13 ಜನ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನು ಹಾಜರು ಪಡಿಸಲು ಸಿದ್ಧತೆ ನಡೆಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿದಂತೆ 17 ಜನ ಅರೆಸ್ಟ್ ಆಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪುನಃ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ ಮಾಡಲು ರಿಮ್ಯಾಂಡ್ ಅರ್ಜಿ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ನಿಟ್ಟಿನಲ್ಲಿಯೇ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಬೇಕೆಂದು ಕೋರಿ 10ಕ್ಕೂ ಅಧಿಕ ಅಂಶಗಳ ರಿಮ್ಯಾಂಡ್ ಅಪ್ಲಿಕೇಷನ್ ತಯಾರಿ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಕೋರ್ಟ್ಗೆ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಲು ಮುಂದಾಗಿದ್ದಾರೆ.
ಎ1 ರಿಂದ ಎ17 ಆರೋಪಿಗಳು ಅಪಹರಣ, ಕೊಲೆ, ಒಳ ಸಂಚು, ಮತ್ತು ಸಾಕ್ಷಿನಾಶದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಕೃತ್ಯಕ್ಕೆ ಬಳಸಿದ್ದ ವಾಹನಗಳು ಬೇರೆಯವರ ಹೆಸರಿನಲ್ಲಿದ್ದು, ಮಾಲೀಕರನ್ನ ಪತ್ತೆ ಮಾಡಿ ಹೇಳಿಕೆ ದಾಖಲಿಸುವುದು. ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನ ನಾಶಪಡಿಸಿರುವುದು ತನಿಖೆಯಲ್ಲಿ ಪತ್ತೆ. ಬೇರೆಯವರ ಹೆಸರಿನಲ್ಲಿ ಸಿಮ್ ಖರೀದಿ, ಸಿಮ್ ನೊಂದಣೆಯಾದ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ವಿಚಾರಣೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ.