ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅಭಿಮಾನಿಗಳು ಸದ್ಯ ಬೇಸರದಲ್ಲಿದ್ದಾರೆ.
ಹೀಗಾಗಿ ಇದೇ ಸಮಯವನ್ನು ‘ಸದುಪಯೋಗ’ ಪಡಿಸಿಕೊಳ್ಳುತ್ತಿರುವ ಕೆಲವು ನಿರ್ಮಾಪಕರು, ವಿತರಕರು ದರ್ಶನ್ ರ ಹಳೆಯ ಸಿನಿಮಾಗಳನ್ನು ಮತ್ತೆ ಬಿಡುಗಡೆ ಮಾಡಿ, ಲಾಭ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಈ ಹಾದಿಯಲ್ಲಿ ಈಗ ಕರಿಯ ಚಿತ್ರ ಬಿಡುಗಡೆಯಾಗಿದೆ. ದರ್ಶನ್ ಅಭಿಮಾನಿಗಳು ಅತರೇಕರ ಅಭಿಮಾನದಿಂದ ಸಿನಿಮಾವನ್ನು ಸ್ವಾಗತಿಸುತ್ತಿದ್ದಾರೆ. ಕೆಲ ಅಭಿಮಾನಿಗಳ ವರ್ತನೆಯಂತೂ ಹೇಳತೀರದಾಗಿದೆ. ಇಂತಹ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ಪ್ರಸನ್ನ ಚಿತ್ರಮಂದಿರದಲ್ಲಿ ‘ಕರಿಯ’ ಸಿನಿಮಾದ ಮರು ಬಿಡುಗಡೆ ಮಾಡಲಾಗಿದೆ. ಬೆಳಿಗಿನಿಂದಲೇ ದರ್ಶನ್ ಅಭಿಮಾನಿಗಳು, ದರ್ಶನ್ರ ಆರೋಪಿ ಸಂಖ್ಯೆ ಹೊಂದಿರುವ ಕಟೌಟ್, ಬ್ಯಾನರ್ ಗಳನ್ನು ಚಿತ್ರಮಂದಿರದ ಹೊರಗೆ ಹಾಕಿದ್ದಾರೆ. ಅದರ ಜೊತೆಗೆ ದರ್ಶನ್, ಜೈಲಿನಲ್ಲಿ ಸಿಗರೇಟು ಸೇದುತ್ತಾ ಕೂತಿದ್ದ ಪೋಸ್ಟರ್ ಹಾಕಿದ್ದಾರೆ. ಅಲ್ಲದೇ, ‘ಏನ್ರಿ ಮೀಡಿಯಾ’ ಎಂಬ ಕಟೌಟ್ ನ್ನು ಸಹ ಅಭಿಮಾನಿಗಳು ಹಾಕಿದ್ದರು. ಹಲವರು ಮಾಧ್ಯಮಗಳ ವಿರುದ್ಧ ಕೂಡ ಘೋಷಣೆ ಕೂಗಿದ್ದಾರೆ. ಹೀಗಾಗಿ ಅತಿರೇಕದ ವರ್ತನೆ ಬೇಡ. ಶಾಂತರೀತಿಯಲ್ಲಿ ವರ್ತಿಸುವಂತೆ ಪೊಲೀಸರು ಮನವಿ ಮಾಡಿದ್ದರು. ಆದರೆ, ಹುಚ್ಚಾಟ ಹೆಚ್ಚಾದ ಹಿನ್ನೆಲೆಯಲ್ಲಿ ಹಲವರನ್ನು ಪೊಲೀಸರು ಎಳೆದೊಯ್ದಿದ್ದಾರೆ.
ಬಳ್ಳಾರಿ ಜೈಲಿನ ಬಳಿಯೂ ನೀನ್ನೆ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ರುಚಿ ತೋರಿಸಿದ್ದರು. ಹಲವೆಡೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ, ದರ್ಶನ್ ಗೆ ಹಾರೈಸುತ್ತಿದ್ದಾರೆ.