ಪ್ರತಿಷ್ಠಿತ ಸೈಮಾ ಪ್ರಶಸ್ತಿ ಅವಾರ್ಡ್ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಸೈಮಾ ಅವಾರ್ಡ್ ‘ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್’ ಎಂದೇ ಖ್ಯಾತಿ ಗಳಿಸಿದೆ. ಸದ್ಯ ಈ ಪ್ರಶಸ್ತಿಗಾಗಿ ಹಲವು ಚಿತ್ರಗಳ ಮಧ್ಯೆ ಫೈಟ್ ಶುರುವಾಗಿದೆ.
ಈ ಪ್ರಶಸ್ತಿಯನ್ನು ಕೂಡ ದಕ್ಷಿಣ ಭಾರತದ ಸಿನಿಮಾಗಳಿಗೆ ನೀಡಲಾಗುತ್ತದೆ. 2024ರ ಸೈಮಾ ನಾಮಿನೇಷನ್ (SIIMA Nomination) ಪಟ್ಟಿ ಬಿಡುಗಡೆಯಾಗಿದ್ದು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನ ಹಲವು ಸಿನಿಮಾಗಳು ಈ ಪ್ರಶಸ್ತಿಯ ರೇಸ್ ನಲ್ಲಿವೆ.
SIIMA ನ ಅಧ್ಯಕ್ಷ ಬೃಂದಾ ಪ್ರಸಾದ್ 2023ರ SIIMA ನಾಮನಿರ್ದೇಶನ ಸಿನಿಮಾ ಪಟ್ಟಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಇತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾದ ಪ್ರಾದೇಶಿಕ ಸಿನಿಮಾಗಳು ಭಾಷೆಯನ್ನು ಮೀರಿ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ SIIMA 2024 ಪ್ರಬಲ ಸ್ಪರ್ಧಿಗಳ ಪಟ್ಟಿಯನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.
ಈಗ ಸೈಮಾ ರೇಸ್ ನಲ್ಲಿ ಕನ್ನಡ-ಕಾಟೇರ, ತೆಲುಗು-ದಸರಾ, ತಮಿಳು-ಜೈಲರ್, ಮಲಯಾಳಂ-2018 ಇವೆ. ‘ಕಾಟೇರ’ (Kaatera Film) ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ. ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದೆ. ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮನ್ನನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.
ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್ ಬುಕ್ ಪುಟದಲ್ಲಿ ವೋಟ್ ಮಾಡಿ ಆಯ್ಕೆ ಮಾಡಬಹುದು. ಈ ಪ್ರಶಸ್ತಿಯನ್ನು ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನೀಡಲಾಗುತ್ತದೆ.