ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ವಿಜಯಲಕ್ಷ್ಮೀಗೆ ಸಿ.ಕೆ ಅಚ್ಚುಕಟ್ಟು ಪೊಲೀಸರು ನೋಟಿಸ್ ನೀಡಿದ್ದಾರೆ.
ಆದರೆ, ಪೊಲೀಸರ ನೋಟಿಸ್‌ಗೆ ವಿಜಯಲಕ್ಷ್ಮೀ ಯಾವುದೇ ಪ್ರತಿಕ್ರಿಯ ನೀಡಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ.
ಅಶ್ಲೀಲ ಕಮೆಂಟ್ ಮಾಡಿದವರ ಬಗ್ಗೆ, ಸಾಮಾಜಿಕ ಜಾಲತಾಣಗಳ ಖಾತೆಗಳ ಬಗ್ಗೆ, ಖಾತೆ ಐಡಿ, ಐಪಿ ಅಡ್ರೆಸ್ ಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು ಆರು ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಕಮೆಂಟ್ ಮಾಡಿ ನಿಂದನೆ ಮಾಡಲಾಗಿದ್ದು, ಅಶ್ಲೀಲ ಕಮೆಂಟ್ಸ್ ಬಗ್ಗೆ ಠಾಣೆಯ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಸೆಲ್ ನಿಂದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಈ ಕುರಿತು ಬಿಎನ್ಎಸ್ ಸೆಕ್ಷನ್ 75, 79, ಹಾಗೂ ಐಟಿ ಆ್ಯಕ್ಟ್ 67, 66 ಅಡಿ ಪ್ರಕರಣ ದಾಖಲಾಗಿದೆ.