ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಜನ ಜೈಲು ಸೇರಿದ್ದಾರೆ. ಬುಧವಾರವಷ್ಟೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಮಧ್ಯೆ ಪತ್ನಿ ವಿಜಯಲಕ್ಷ್ಮೀ ಜೈಲಿಗೆ ತೆರಳಿ ದರ್ಶನ್ ಜೊತೆ ಮಾತನಾಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ರನ್ನು ಭೇಟಿಯಾಗಲು ತೆರಳಿದ ವಿಜಯಲಕ್ಷ್ಮಿ ಅವರು ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಲವು ಅಗತ್ಯ ವಸ್ತುಗಳನ್ನು ದರ್ಶನ್ಗೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯ ಆಗಿದ್ದು, ಚಾರ್ಜ್ ಶೀಟ್ ಕೂಡ ಸಲ್ಲಿಕೆ ಆಗಿದೆ.
ಇನ್ನೇನಿದ್ದರೂ ಪ್ರಕರಣದ ವಿಚಾರಣೆ ಮಾತ್ರ ನಡೆಯಲಿದ್ದು, ಈ ಮಧ್ಯೆ ದರ್ಶನ್ ಚಿಂತಾಕ್ರಾಂತರಾಗಿದ್ದಾರೆ. ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬ ಟೆನ್ಶನ್ ನಲ್ಲಿದ್ದಾರೆ. ಹೀಗಾಗಿ ಜೈಲಿನಲ್ಲಿ ಮೌನ ವಹಿಸಿದ್ದಾರೆ ಎನ್ನಲಾಗಿದೆ.