ಮೈಸೂರು: ಬೂಕರ್ ಸಾಹಿತ್ಯ ಪ್ರಶಸ್ತಿ ವಿಜೇತೆ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಇಂದು ಸಂಜೆ 4 ಗಂಟೆಗೆ ಅಧಿಕೃತವಾಗಿ ಮೈಸೂರು ಜಿಲ್ಲಾಡಳಿತದಿಂದ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
ಈಗಾಗಲೇ ಸರ್ಕಾರ ಉದ್ಘಾಟಕರ ಹೆಸರು ಘೋಷಣೆ ಮಾಡಿದ್ದು, ಭಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ವಿಚಾರವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರ ವಿರೋಧದ ಹೊರತಾಗಿಯೂ ಇಂದು ಅಧಿಕೃತ ಆಹ್ವಾನ ನೀಡಲು ಸರ್ಕಾರ ಮುಂದಾಗಿದೆ.