ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿದ್ದ ಗ್ರಾಪಂ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ.
ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟವಾಗಿದೆ. ಚುನಾವಣಾ ನೀತಿ ಸಂಹಿತೆ 8-05-25 ರಿಂದ 28-05-25 ರವರೆಗೆ ಜಾರಿ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಆರಂಭ ಮೇ 8ರಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ ಮೇ 14 ಆಗಿದೆ. ಮೇ 15ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಮೇ 17 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿದೆ. ಮೇ 25ರಂದು ಮತದಾನ ನಡೆಯಲಿದೆ. ಮತದಾನ ಬೆಳಗ್ಗೆ 5 ರಿಂದ ಸಂಜೆ 5ರ ವರೆಗೆ ನಡೆಯಲಿದೆ. ಮೇ 28ರಂದು ಫಲಿತಾಂಶ ಹೊರ ಬೀಳಲಿದೆ.