ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಪರೀಕ್ಷೆಗಳ ದಿನಾಂಕವನ್ನು ಘೋಷಿಸಲಾಗಿದೆ.
ಮೇ.31ರಂದು ಡಿಸಿಇಟಿ ಪರೀಕ್ಷೆ ನಡೆಯಲಿದೆ. ಡಿಸಿಇಟಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 24ರಿಂದ ಮೇ 10ರ ವರೆಗೆ ಅವಕಾಶ ನೀಡಲಾಗಿದೆ.
ಮೇ. 31ರಂದು ಪಿಜಿಸಿಇಟಿ ಪರೀಕ್ಷೆ ನಡೆಯಲಿದೆ. ಇದು ME, Mtech March ಕೋರ್ಸ್‌ಗಳ ಪ್ರವೇಶಕ್ಕೆ ನಡೆಯಲಿರುವ ಪರೀಕ್ಷೆ ಆಗಿದೆ. ಈ ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 24ರಿಂದ ಮೇ 10ರ ವರೆಗೆ ಅವಕಾಶ ನೀಡಲಾಗಿದೆ.
MCA ಮತ್ತು MBA ಕೋರ್ಸ್ ಗಳ ಪ್ರವೇಶಕ್ಕೆ ಜೂನ್ 22ರಂದು ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಏಪ್ರಿಲ್ 24ರಿಂದ ಜೂನ್ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎಂ.ಫಾರ್ಮ ಮತ್ತು ಫಾರ್ಮಾ-ಡಿ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ 22ರಂದು ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಏಪ್ರಿಲ್ 24ರಿಂದ ಜೂನ್ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.