ನಟ ಪ್ರವೀರ್ ಶೆಟ್ಟಿ ಅಭಿನಯದ ’ನಿದ್ರಾದೇವಿ Next Door’ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನ. 20ರಂದು ಸಂಜೆ 5ಕ್ಕೆ ವಸಂತ ನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯಲಿದೆ.
ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ’ನಿದ್ರಾದೇವಿ Next Door’ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ.

ಸುರಾಗ್ ಸಾಗರ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು, ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ನಟಿಸಿದ್ದಾರೆ. ನಾಯಕಿಯಾಗಿ ರಿಷಿಕಾ ನಾಯಕ್ ಅಭಿನಯಿಸಿದ್ದಾರೆ. ಅಲ್ಲದೇ, ಹಿರಿಯ ನಟಿ ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಹಲವರು ನಟಿಸಿದ್ದಾರೆ.

ಸೂರಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಜಯರಾಮ್ ದೇವಸಮುದ್ರ ಬಂಡವಾಳ ಹೂಡಿದ್ದಾರೆ. ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ.