ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಈಗ ಮೇಲ್ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದ್ದು, ಜ. 24ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.
ಡಿ. 13ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಪೂರ್ಣಾವಧಿಗೆ ಜಾಮೀನು ಮಂಜೂರಾಗಿತ್ತು. ಆದರೆ, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಹೀಗಾಗಿ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.
ಯಾರ ಜಾಮೀನು ವಿರೋಧಿಸಿ ಅರ್ಜಿ ಸಲ್ಲಿಕೆ?
ಸುಪ್ರೀಂಕೋರ್ಟ್ ನಲ್ಲಿ ಸರ್ಕಾರದ ಪರ ಅನಿಲ್ ಸಿ.ನಿಶಾನಿ ವಾದ ಮಂಡಿಸಲಿದ್ದಾರೆ. ಒಂದು ವೇಳೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದರೆ, ದರ್ಶನ್ ಆಂಡ್ ಗ್ಯಾಂಗ್ ಮತ್ತೆ ಜೈಲು ಸೇರಬೇಕಾಗುತ್ತದೆ. ಪವಿತ್ರಾ ಗೌಡ (ಎ 1), ದರ್ಶನ್ (ಎ 2) ಜಗದೀಶ್ ಜಗ್ಗ ಅಲಿಯಾಸ್ ಜಗ್ಗ (ಎ 6), ಅನುಕುಮಾರ್ ಅಲಿಯಾಸ್ ಅನು (ಎ 7), ಆರ್ ನಾಗರಾಜು (ಎ 11), ಎಂ ಲಕ್ಷ್ಮಣ್ (ಎ 12), ಪ್ರದೋಶ್ ಎಸ್. ರಾವ್ (ಎ 14) ಜಾಮೀನು ರದ್ದು ಮಾಡಬೇಕೆಂದು ಅರ್ಜಿ ಸಲ್ಲಿಸಲಾಗಿದೆ.