ಕೋಲಾರ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ತಂದೆ(Father) ಯಿಂದಲೇ ಮಗಳು (daughter) ಗರ್ಭಿಣಿಯಾಗಿರುವ ಅಮಾನವೀಯ ಹಾಗೂ ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ.
ಮಗಳನ್ನು ಕೆಟ್ಟವರಿಂದ ರಕ್ಷಿಸಬೇಕಿದ್ದ ಪಾಪಿ ತಂದೆಯೇ ಈ ಕೃತ್ಯ ಎಸಗಿದ್ದಾನೆ. ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.
ಅಪ್ಪಯ್ಯಪ್ಪ ಎಂಬ ಕಾಮುಕ ತಂದೆ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳಿನಿಂದ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಯುವತಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದಾಗ ತಂದೆಯ ವಿಕೃತ ಕಾಮ ಬೆಳಕಿಗೆ ಬಂದಿದೆ.
ಈ ಪಾಪಿ ತಂದೆಗೆ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗ ಇದ್ದಾನೆ. ತಾಯಿ ಇಲ್ಲದ ಮಕ್ಕಳನ್ನು ತಾನೇ ನೋಡಿಕೊಳ್ಳುತ್ತಿದ್ದ. ಮೊದಲ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ದಾನೆ. ಆದರೆ, 20 ವರ್ಷದ ಮೂರನೇ ಮಗಳ ಮೇಲೆ ತನ್ನ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಮಗಳು ಎನ್ನುವುದನ್ನೇ ಮರೆತ ಪಾಪಿ, ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಯುವತಿ ಗರ್ಭಿಣಿಯಾಗಿದ್ದಾಳೆ. ಈಗ ಪಾಪಿ ತಂದೆಯ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.