ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಬೈ ಎಲೆಕ್ಷನ್ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಇಂದು ರಾಜ್ಯ ಹಾಗೂ ರಾಷ್ಟ್ರ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ದಾವಣಗೆರೆ ದಕ್ಷಿಣ ಭಾಗದ ಆನೆಕೊಂಡ ಬಸವೇಶ್ವರ ಸ್ವಾಮಿ ದೇವಸ್ಥಾನ ಹಾಗೂ ನಗರ ದೇವತೆ ದುರ್ಗಾಂಬಿಕ ದೇವಸ್ಥಾನ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರಿನಿವಾಸ್ ದಾಸ್ ಕರಿಯಪ್ಪ, ಗರಡಿಮನೆಯ ಆಂಜನೇಯ ಸ್ವಾಮಿ ಮೂರ್ತಿ ಮುಂದೆ ನಾಮಪತ್ರ ಹಾಗೂ ಬಿ-ಫಾರಂ ಇಟ್ಟು ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಮಾಜಿ ಸಂಸದರದ ಜಿಎಂ ಸಿದ್ದೇಶ್ವರವರಿಗೆ ನಮಸ್ಕಾರಿಸಿ ಬಿ ಫಾರಂ ತೋರಿಸಿ ಆಶೀರ್ವಾದ ಪಡೆದರು. ನಂತರ ಪತ್ನಿ ಹಾಗೂ ಬಿಜೆಪಿ ಮುಖಂಡರ ಜೊತೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ನಂತರ ದುರ್ಗಾಂಬಿಕ ದೇವಸ್ಥಾನದಿಂದ ಅದ್ದೂರಿ ಮೆರವಣಿಗೆ ಮೂಲಕ ಆಗಮಿಸಿದ ಶ್ರೀನಿವಾಸ್ ದಾಸ ಕರಿಯಪ್ಪ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಸಾಥ್ ನೀಡಿದರು.
ಇದನ್ನೂ ಓದಿ : ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ



















