ದಾವಣಗೆರೆ: ಭದ್ರಾ ಬಲದಂಡೆ ನಾಲೆ ಸೀಳಿ ಕುಡಿಯುವ ನೀರು ಸರಬರಾಜು ಕಾಮಗಾರಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಕೌಂಟರ್ ನೀಡಲು ದಾವಣಗೆರೆಯ ಕೈ ಶಾಸಕರು ಸಿದ್ಧವಾಗಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಆ.9ರಂದು ಬೃಹತ್ ರೈತ ಸಭೆ ಆಯೋಜನೆಯ ವಿಚಾರವಾಗಿ ದಾವಣಗೆರೆಯಲ್ಲಿ ಮೂವರು ಕಾಂಗ್ರೆಸ್ ಶಾಸಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಮಾಯಕೊಂಡ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಚೀಫ್ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದ್ದು, ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ಪರಿಹಾರ ನೀಡಲು ಇದೇ ಶನಿವಾರದಂದು ಹೊನ್ನಾಳಿಯಲ್ಲಿ ರೈತರ ಸಭೆ ಆಯೋಜನೆ ಮಾಡಿದ್ದೇವೆ ಎಂದರು.
ಹೊನ್ನಾಳಿ ಕಾಂಗ್ರೆಸ್ ಶಾಸಕ ಶಾಂತನಗೌಡ ಮಾತನಾಡಿ, ಬಿಜೆಪಿಗೆ ಕೌಂಟರ್ ಕೊಡಲೆಂದೇ ಸಭೆ ಮಾಡುತಿದ್ದೇವೆ. ರೈತರ ವಿಚಾರದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು ನಾವು ರೈತರಿಗೆ ನ್ಯಾಯ ಒದಗಿಸಬೇಕು ಸುಳ್ಳು ಮಾಹಿತಿ ನೀಡಬಾರದು ಎಂದು ಸಭೆ ಮಾಡುತಿದ್ದೇವೆ. ಕಾಂಗ್ರೆಸ್ ಪಕ್ಷ ರೈತರ ವಿರೋಧ ಎಂದು ಮಾಧ್ಯಮಗಳ ಮೂಲಕ ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

















