ದಾವಣಗೆರೆ : ದಾವಣಗೆರೆಯ ವಿದ್ಯಾನಗರ ಪೊಲೀಸರು ಮಾದಕ ವಸ್ತು ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿ, ರಾಜಸ್ಥಾನದ ತಂಡದೊಂದಿಗೆ ಡ್ರಗ್ಸ್ ಡೀಲ್ ಮಾಡುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಶಾಮನೂರು ವೇದಮೂರ್ತಿ ಸೇರಿ ಹಲವರನ್ನು ಬಂಧಿಸಿದ್ದಾರೆ.

ಆರೋಪಿ ವೇದಮೂರ್ತಿ ರಾಜಸ್ಥಾನದ ಡ್ರಗ್ ಪೆಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದು, ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಶಂಕೆ ವ್ಯಕ್ತವಾಗಿದೆ. ಬಂಧಿತರಿಂದ ಗಾಂಜಾ ಸೇರಿದಂತೆ ನಿಷೇಧಿತ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ವೇದಮೂರ್ತಿ, ರಾಜಕೀಯ ಪ್ರಭಾವ ಬಳಸಿ ದಂಧೆ ನಡೆಸುತ್ತಿದ್ದರೇ ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪೊಲೀಸರು, ಜಾಲದ ಇತರರ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್ ರೈಲು ಆರಂಭಿಸಿ | ಕೇಂದ್ರ ರೈಲ್ವೆ ಸಚಿವರಿಗೆ ಹೆಚ್‌ಡಿಕೆ ಪತ್ರ



















