ಬೆಂಗಳೂರು: ದೆಹಲಿಯತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ ಮಾಡಿದ್ದಾರೆ.
ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳ ಗಡಿಭಾಗದಲ್ಲಿ ಹರಿಯುವ ಪೆನ್ನಾರ್ ನದಿ ನೀರಿನ ವಿವಾದ ಬಗೆಹರಿಸುವ ನಿಟ್ಟಿನಲ್ಲಿ, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರ ಮುಂದೆ ಸಭೆ ನಡೆಯಲಿದ್ದು, ಸಭೆಯಲ್ಲಿ ಭಾಗಿಯಾಗಲು ಡಿಕೆಶಿ ದೆಹಲಿಗೆ ತೆರಳಿದ್ದಾರೆ.