ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಕೆಲವು ಹೊತ್ತು ಚರ್ಚೆ ನಡೆಸಿದರು. ಉಭಯ ನಾಯಕರ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಶತಮಾನೋತ್ಸವ ಪೂರ್ವ ತಯಾರಿ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಅಲ್ಲದೇ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಕೂಡ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಸುವರ್ಣ ಸೌಧ ಅಧಿವೇಶನ ಮುಗಿದಿದ್ದು, ಹಲವಾರು ಚರ್ಚೆಗಳು ಹಾಗೂ ಆರೋಪಗಳು ಈ ಸಂದರ್ಭದಲ್ಲಿ ಕೇಳಿ ಬಂದಿವೆ. ಅಲ್ಲದೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ. ರವಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಮಧ್ಯೆ ನಾಯಕರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.