ಶಿವಮೊಗ್ಗ : ನಗರದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.
ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ್ಯಂಬ್ಯುಲೆನ್ಸ್ ಚಾಲಕನ ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!



















