ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರ ಪೇಟೆ ಬಳಿ ನಡೆದಿದೆ.
ಬೆಂಗಳೂರುನಿಂದ ಶೃಂಗೇರಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಸ್ ಮೇಲೆಯೇ ಬಿದ್ದಿದೆ.
ಬಸ್‌ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಪ್ರಯಾಣಿಕರು ದುರಂತದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ



















