ಕಾರವಾರ : ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ರಾಮನಗರ ಸಮೀಪದ ಅಸ್ತೋಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಗೋವಾದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನೋವಾ ಕಾರು ಹಾಗೂ ಹುಬ್ಬಳ್ಳಿಯಿಂದ ಗೋವಾಕ್ಕೆ ಸಾಗುತ್ತಿದ್ದ ರೆನಾಲ್ಟ್ ಕ್ವಿಡ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ರೆನಾಲ್ಟ್ ಕ್ವಿಡ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ರೆನಾಲ್ಟ್ ಕ್ವಿಡ್ ಕಾರಿನಲ್ಲಿದ್ದ ಚಾಲಕ ರುದ್ರಯ್ಯ ಶಿವನವರ(77) ಮತ್ತು ರೇಣುಕಾ ಹಿರೇಮಠ(60) ಸಾವನ್ನಪ್ಪಿದ್ದಾರೆ. ಇನ್ನುಳಿದ ಇಬ್ಬರು ಗಾಯಳುಗಳನ್ನು ರಾಮನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ರಾಮನಗರ ಪೋಲಿಸರು ದೌಡು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ | ನಿಂತಿದ್ದ ಬೋರ್ವೆಲ್ ಲಾರಿಗೆ ಬೊಲೆರೋ ಡಿಕ್ಕಿ.. ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ!



















