ಬೆಂಗಳೂರು | ಬೆಂಗಳೂರಿನಲ್ಲಿ ಯುವಕನ ಮೇಲೆ ಇಬ್ಬರು ಕಿಡಿಗೇಡಿಗಳು ಡೆಡ್ಲಿ ಅಟ್ಯಾಕ್ ನಡೆಸಿರುವ ಘಟನೆ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ಬಳಿ ನಡೆದಿದೆ. ಇಂದು ಮಧ್ಯಾಹ್ನದ ಸುಮಾರಿಗೆ ಯುವಕನ ಮೇಲೆ ಲಾಂಗ್‌ನಿಂದ ಮನಸೋ ಇಚ್ಚೆ ಹಲ್ಲೆ ಮಾಡಿದ ಕಿಡಿಗೇಡಿ ಯುವಕರು, ಬಳಿಕ ಪರಾರಿಯಾಗಿದ್ದಾರೆ.
ಇನ್ನು ಈ ಘಟಯೆಯ ಭೀಕರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದರೂ ಯುವಕನ್ನ್ನು ಬಿಡದ ದುಷ್ಕರ್ಮಿಗಳು, ಅಟ್ಟಹಾಸ ಮುಂದುವರೆಸಿದ್ದಾರೆ.
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭೀಕರ ಹಲ್ಲೆಯ ದೃಶ್ಯಗಳು ವೈರಲ್ ಆಗ್ತಾ ಇದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಹಲ್ಲೆಗೊಳಗಾದ ಯುವಕನ ಮಾಹಿತಿ ಕಲೆ ಹಾಕ್ತಾ ಇದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಈ ಯುಕನ ಮೇಲೆ ಕಿಡಿಗೇಡಿಗಳು ಅಟ್ಯಾಕ್ ಮಾಡಿದ್ದೇಕೇ ಎಂಬ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!


















