ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ. ಸುಮಾರು 25ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಗಳ ತಂಡ ಬಿಮ್ಸ್ ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ. ಈ ಘಟನೆಗೆ ಕಾರಣವಾಗಿರುವ IV ಹಾಗೂ RL ಪ್ಲೂಯಿಡ್ ಔಷಧಿ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಲ್ಲದೇ, ಬಾಣಂತಿಯರ ಸಾವಿಗೆ ಕಾರಣಗಳನ್ನು ಪಟ್ಟಿ ಮಾಡಲಾಗುತ್ತಿದೆ.