ಚಾಮರಾಜನಗರ: ದುಷ್ಕರ್ಮಿಗಳು ವಿಷಪ್ರಾಶನ ನೀಡಿದ್ದರಿಂದಾಗಿ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹುಲಿಗಳ ಅಸಹಜ ಸಾವಿಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದ್ದು, ಒಂದು ವೇಳೆ ದುಷ್ಕರ್ಮಿಗಳು ವಿಷವೂಣಿಸಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಮಲೆಮಹದೇಶ್ವರ ವನ್ಯಧಾಮದ ಮೀಣ್ಯಂ ವಲಯದಲ್ಲಿ ಈ ಘಟನೆ ನಡೆದಿದೆ. ವಿಷ ಪ್ರಶಾನ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದರೆ ಶಿಸ್ತು ಕ್ರಮಕ್ಕೆ ಸೂಚಿಸಿದ್ದಾರೆ. ವಿಷಪ್ರಾಶಾನವಾಗಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲು ಸೂಚಿಸಿದ್ದಾರೆ.