ಹುಬ್ಬಳ್ಳಿ : ಅವಳಿ ಮಕ್ಕಳ ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕರ ಮನೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿದ್ದಾರೆ.
ಗುರುವಾರದಂದು ಅಂಗನವಾಡಿಯಿಂದ ವಾಪಸ್ ಆಗುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಮುದಸ್ಸಿರ್ ಶರೀಫ್ ಸಾಬ್ ಚಂದುಖಾನವರ(3), ಮುಜಮ್ಮಿಲ್ ಶರೀಫ್ ಸಾಬ್ ಚಂದುಖಾನವರ ಸಾವನ್ನಪ್ಪಿದ್ದರು. ಧಾರವಾಡ ಜಿಲ್ಲೆಯ ಕುಂದಗೋಳದ ಯರಿನಾರಾಯಣಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿನ ಬಾಲಕರ ಮನೆಗೆ ಭೇಟಿ ಸಂತೋಷ್ ಲಾಡ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಅಲ್ಲದೇ, ಲಾಡ್ ಫೌಂಡೇಶನ್ ನಿಂದ ನಾಲ್ಕು ಲಕ್ಷ ರೂ. ಚೆಕ್ ವಿತರಣೆ ಮಾಡಲಾಗಿದೆ. ಸರ್ಕಾರದಿಂದಲೂ ಹೆಚ್ಚಿನ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ಲಾಡ್ ನೀಡಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.