ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಪಂ ನೌಕರರ ಸಂಘದಿಂದ ಫೆ. 20 ರಂದು ಬೆಂಗಳೂರಿನ ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಈ ಕುರಿತು ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಬಿ. ನಾಡಗೌಡ(MB Nad Gowda) ಹೇಳಿದ್ದಾರೆ. ಕೋಲಾರದಲ್ಲಿ ನಡೆದ ಗ್ರಾಪಂ ಬಿಲ್ ಕಲೆಕ್ಟರ್, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್‌ಗಳ ವಿಭಾಗ ಮಟ್ಟದ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ವೇತನ ನೀಡದೆ ಶೋಷಿಸಲಾಗುತ್ತಿದೆ.
ಹೀಗಾಗಿ ಜೀವನಇದರಿಂದ ಅವರ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.