ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ(Koppa) ತಾಲ್ಲೂಕಿನ ಮೇಗುಂದಾ ಗ್ರಾಮದಲ್ಲಿ ಮತ್ತೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರಣ್ಯ ಭೂಮಿ ಒತ್ತುವರಿ ತೆರವು ಆತಂಕದಿಂದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೀಗಾಗಿ ಒಂದೇ ವಾರದಲ್ಲಿ ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತ ಕರುಣಾಕರ್ (58) ಸಾವನ್ನಪ್ಪಿದ್ದಾರೆ. ಮೂರು ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡಿದ್ದರು. ರೈತ, ಕೃಷಿ ನಂಬಿ ಸೊಸೈಟಿ, ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡಿದ್ದ. ಒತ್ತುವರಿ ತೆರವು ಆತಂಕದಿಂದ ರೈತ ಕರುಣಾಕರ್ ಆತ್ಮಹ್ಯತೆ ಮಾಡಿಕೊಂಡಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ಕಂಚೇನಹಳ್ಳಿ ಗ್ರಾಮದ ರೈತ ಮಲ್ಲೇಶ್ ಎಂಬಾತ ಕೆರೆ ಪಕ್ಕದ ಜಾಗದಲ್ಲಿ ಕಾಫಿ ತೋಟ ಬೆಳೆದಿದ್ದ. ಅಧಿಕಾರಿಗಳು ಏಕಾಏಕಿ ಸ್ಥಳಕ್ಕೆ ಹೋಗಿ ಒಂದೂ ನೋಟಿಸ್ ನೀಡದೆ ತೆರವಿಗೆ ಮುಂದಾಗಿದ್ದರು. ಒಂದು ಕಡೆ ಸಾಲದ ಶೂಲ, ಮತ್ತೊಂದು ಕಡೆ ತೆರವಿನ ಆತಂಕಕ್ಕೆ ಒಳಗಾಗಿ ಅಧಿಕಾರಿಗಳ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಲ್ಲೇಶ್ ಚಿಕಿತ್ಸೆ ಫಲಿಸದೆ ಕಳೆದ ಎರಡು ದಿನಗಳ ಹಿಂದೆ ಸಾವನ್ನಪ್ಪಿದ್ದ. ಈಗ ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒತ್ತುವರಿ ತೆರವು ಆತಂಕ ಮನೆ ಮಾಡಿದ್ದು, ಒತ್ತುವರಿ ತೆರವಿಗೆ ಹೆದರಿ ಒಂದೇ ವಾರದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.