ಬೆಂಗಳೂರು: ಶಾಸಕರ ಸಂಬಳ ಹೆಚ್ಚಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಕಲಾಪ ಸಲಹಾ ಸಮಿತಿಯಲ್ಲಿ ಶಾಸಕರ ಸಂಬಳ ಹೆಚ್ಚಿಸುವ ನಿರ್ಣಯ ಕೈಗೊಳ್ಳಲಾಗಿದೆ. ಈ ಕುರಿತು ಬಿಇಎಸ್ ಸಭೆಯಲ್ಲಿ ಶಾಸಕರ ಸಂಬಳವನ್ನು ಶೇ. 50ರಷ್ಟು ಹೆಚ್ಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಬಾರಿ ಅಧಿವೇಶನ ವೇಳೆ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಚರ್ಚೆ ನಡೆಸಿದ್ದರು. ಆ ವೇಳೆ ಸಂಬಳ ಹೆಚ್ಚಳದ ಬಗ್ಗೆ ಮಾತನಾಡಿದ್ದ ಅವರು, ಸಂಬಳ ಹೆಚ್ಚಳಕ್ಕೆ ಆಯೋಗ ರಚನೆ ಮಾಡಿ ಎಂದು ಒತ್ತಾಯಿಸಿದ್ದರು.
ಈಗ ಬಿಎಸಿ ಸಭೆಯಲ್ಲಿ ಸಂಬಳ ಹೆಚ್ಚಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ಶಾಸಕರ ಕ್ಲಬ್ ಗೆ 20 ಕೋಟಿ ಅನುದಾನ ಬಿಡುಗಡೆ ಮಾಡಲು ಕೂಡ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.