ಚಾಮರಾಜನಗರ: ಆಕ್ಸಿಜನ್ ದುರಂತ ಸಂತ್ರಸ್ತರ ನಿರೀಕ್ಷೆ ಹುಸಿಯಾಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.
ಜಿಲ್ಲೆಯಲ್ಲಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗಷ್ಟೇ ಸಚಿವ ಸಂಪುಟ ಸಭೆ ನಡೆದಿದೆ. ಆದರೆ, ಈ ಸಭೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ನೀಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ, ಸರ್ಕಾರಿ ನೌಕರರ ಭರವಸೆ ಕೂಡ ಈಡೇರಿಲ್ಲ.
ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ಆಗದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ್ದ ತಲಾ ಒಂದು ಲಕ್ಷ ರೂ. ಪರಿಹಾರವನ್ನು ಮರಳಿ ನೀಡಲು ಸಂತ್ರಸ್ತ ಕುಟುಂಬಗಳು ನಿರ್ಧರಿಸಿವೆ. ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರೂ ಸಿಎಂ ಸಿದ್ದರಾಮಯ್ಯ ನಿರ್ಲಕ್ಷ್ಯ ವಹಿಸಿದ್ದಾರೆಂದು ಆರೋಪಿಸಲಾಗಿದೆ.