ಯಾದಗಿರಿ: ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡಲು ಮುಂದಾಗಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿಯಲ್ಲಿ ಹಮ್ಮಿಕೊಂಡ ಜೆಡಿಎಸ್ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಮಾತನಾಡಿದ ಅವರು, ದಕ್ಷ ಅಧಿಕಾರಿಗಳಿಗೆ ಯಾದಗಿರಿಯಲ್ಲಿ ಉಸಿರು ಗಟ್ಟಿರುವ ವಾತಾವರಣವಿದೆ. ಸರ್ಕಾರವು ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡಲು ಮುಂದಾಗಿದೆ. ಕಾಂಗ್ರೆಸ್ ನ ಪ್ರಭಾವಿ ರಾಜಕೀಯ ವ್ಯಕ್ತಿಗಳು ನಿಷ್ಠಾವಂತ ಅಧಿಕಾರಿಯನ್ನು ವರ್ಗಾವಣೆ ಮಾಡಲು ಮುಂದಾಗಿದ್ದಾರೆ. ಹೀಗಾಗಿಯೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಹೇಳಿದ್ದಾರೆ.