ಕೋಲಾರ: ನಾಯಿಗಳ ದಾಳಿಯಿಂದ ಜಿಂಕೆಯನ್ನು ಯುವಕರು ರಕ್ಷಿಸಿರುವ ಘಟನೆ ನಡೆದಿದೆ.
ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದಾಗಿ ಜಿಂಕೆ ಗಂಭೀರವಾಗಿ ಗಾಯಗೊಂಡಿದೆ. ಕೂಡಲೇ ಜಿಂಕೆಯನ್ನು ಯುವಕರು ರಕ್ಷಿಸಿದ್ದಾರೆ. ಜಿಂಕೆಗೆ ಚಿಕಿತ್ಸೆ ನೀಡುವ ವಿಷಯವಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ರೀತಿ ಸ್ಪಂದಿಸಿಲ್ಲ ಎಂದು ಯುವಕರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜಾವ್ದಾರಿಯಿಂದಾಗಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಯುವಕರು ಬೇಸರ ವ್ಯಕ್ತಪಡಿಸಿದ್ದಾರೆ. ಆನಂತರ ವೇಮಗಲ್ ಯುವಕರು, ಜಿಂಕೆಯನ್ನ ಪಶು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.