ಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿ 5 ದಿನಗಳ ಕಳೆದಿವೆ. ಇದೀಗ ಕಾಶ್ಮೀರದ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ. ಇಲ್ಲಿನ ಭುಜ್ ವಾಯುನೆಲೆಗೆ ಭೇಟಿ ನೀಡಿದ ರಾಜನಾಥ್ ಸಿಂಗ್ ಯೋಧರೊಟ್ಟಿಗೆ ಸಮಾಲೋಚನೆ ನಡೆಸಿದ್ದಾರೆ. ರಕ್ಷಣಾ ಸಚಿವರಿಗೆ ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಮನೋಜ್ ಸಿನ್ಮಾ ಕೂಡಾ ಸಾಥ್ ನೀಡಿದ್ದಾರೆ. ಏಪ್ರಿಲ್ 22ರ ಪಹಲ್ಗಾಮ್ ದಾಳಿ ಬಳಿಕ ಇದೇ ಮೊದಲ ಬಾರಿಗೆ ರಕ್ಷಣಾ ಸಚಿವರು ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಕೂಡಾ ಪಂಜಾಬ್ ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಯೋಧರ ಆತ್ಮಸೈರ್ಯ ಹೆಚ್ಚಿಸುವ ಕಾರ್ಯ ಮಾಡಿದ್ರು.