ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಬಿಡುಗಡೆಗೆ ವಿಳಂಬವಾಗಿರುವುದನ್ನು ಖಂಡಿಸಿ ಚಿತ್ರದುರ್ಗದಲ್ಲಿ ರೈತ ಸಂಘದ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮುಂದುವರಿದಿದೆ.
ನಗರದ ಡಿಸಿ ಕಚೇರಿ ಮುಂಭಾಗ ಕಳೆದ ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ನೂರಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದಾರೆ. ಬೆಳಿಗ್ಗೆಯಿಂದಲೇ ಡಿಸಿ ಕಚೇರಿ ಎದುರು ಭಜನೆ ಮಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕನಿಷ್ಠ 5,000 ಕೋಟಿ ರೂ. ಮೀಸಲಿಡಬೇಕು ಹಾಗೂ ಕೇಂದ್ರ ಸರ್ಕಾರ 5,300 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಸತ್ಯಾಗ್ರಹದಲ್ಲಿ ರೈತ ಮುಖಂಡರಾದ ಈಚಘಟ್ಟ ಸಿದ್ದವೀರಪ್ಪ, ಬಸವರೆಡ್ಡಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಜಾರಿಯಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ.
ಇದನ್ನೂ ಓದಿ : ಕೊಟ್ಟಿಗೆಯಲ್ಲಿ ಆಕಸ್ಮಿಕ ಬೆಂಕಿ | 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ



















