ನವದೆಹಲಿ: ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ವಶದಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ನಡೆಸುವುದಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠ ಹೇಳಿದೆ. ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು. ಆನಂತರ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಮಹತ್ವದ ಬೆಳವಣಿಗೆಯಲ್ಲಿ ಕೇಜ್ರಿವಾಲ್ (Aravind Kejriwal) ನೇರವಾಗಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 439 ರ ಅಡಿಯಲ್ಲಿ ಜಾಮೀನಿಗಾಗಿ ನೇರವಾಗಿ ಹೈಕೋರ್ಟ್‌ಗೆ ಹೋಗಲು ಯಾವುದೇ ಅಡ್ಡಿ ಇಲ್ಲ ಎಂದು ವಕೀಲರು ತಿಳಿಸಿದ್ದಾರೆ. ಜುಲೈ 12 ರಂದು ನಡೆಯುವ ವಿಚಾರಣೆ ಅರವಿಂದ್ ಕೇಜ್ರಿವಾಲ್ ಅವರಿಗೆ ಮಹತ್ವದಾಗಿದೆ.
