ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ ನಿಂದ ಜೈಲಿನಲ್ಲಿದ್ದ ಕೆ. ಕವಿತಾ ಇಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ತೆಲಂಗಾಣದ ರಾಜಕಾರಣಿ ಕವಿತಾ ಅವರಿಗೆ ಇಂದು ಬೆಳಿಗ್ಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. 46 ವರ್ಷದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕವಿತಾ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆಯನ್ನು ಪೂರ್ಣಗೊಳಿಸಿರುವುದರಿಂದ ಕಸ್ಟಡಿಯಲ್ಲಿ ಇಟ್ಟುಕೊಳ್ಳುವುದು ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಜುಲೈ 1ರ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ಪೀಠವು, ಪ್ರತಿಯೊಂದು ಪ್ರಕರಣದಲ್ಲಿ 10 ಲಕ್ಷ ರೂ. ಮೊತ್ತದ ಜಾಮೀನು ಬಾಂಡ್ ಗಳನ್ನು ಒದಗಿಸುವ ಮೂಲಕ ಮೇಲ್ಮನವಿದಾರರಾದ ಕವಿತಾರನ್ನು ಕೂಡಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ದೇಶಿಸಿದೆ.