ಕೊಪ್ಪಳ: ಒಳಮೀಸಲಾತಿಗೆ ಆಗ್ರಹಿಸಿ ಕೊಪ್ಪಳದ ಅಶೋಕ ವೃತ್ತದಲ್ಲಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.
ಅಧಿವೇಶನದಲ್ಲಿ ಒಳಮೀಸಲಾತಿಯ ಬಗ್ಗೆ ಧ್ವನಿ ಎತ್ತುವಂತೆ ಸಚಿವ ಶಿವರಾಜ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳರಿಗೆ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ನಾಗಮೋಹನದಾಸ್ ವರದಿ ಮಾಡಿಸಿದ್ದೇ ನಾವು. ಆ 19 ರಂದು ಸಚಿವ ಸಂಪುಟದಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸುತ್ತೇವೆ. ನಾನು ಒಳಮೀಸಲಾತಿ ಪರವಾಗಿದ್ದೇನೆ ಎಂದು ಅವರು ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ.



















