ಧಾರವಾಡ : ಖಾಲಿ ಹುದ್ದೆಗಳ ನೇಮಕಾತಿ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಈ ಬಗ್ಗೆ ಕರ್ನಾಟಕ ರಾಜ್ಯ ವಿದ್ಯಾರ್ಥಿ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಕಾಂತಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆಬ್ರವರಿಯಲ್ಲಿ ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿತ್ತು. ಆಗ ಪ್ರತಿಭಟನೆ ಬಳಿಕ ಒಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭ ಮಾಡುವ ಭರವಸೆ ನೀಡಿತ್ತು. ಆದರೆ ರಾಜ್ಯ ಸರ್ಕಾರದ ಭರವಸೆ ಇಡೇರಿಸದ ಹಿನ್ನೆಲೆ ಈ ಧರಣಿ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆ ನೇಮಕಾತಿ ಹಾಗೂ KPSC ಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ಸಿಬಿಐಗೆ ವಹಿಸುವಂತೆ ಆಗ್ರಸಿ ಏ. 8 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಮ್ಮ ಬೇಡಿಕೆ ಇಡೇರುವವರೆಗೂ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ


















